ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕಿದ್ದರಿಂದ ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬಂಡೆಪಾಳ್ಯ ನಿವಾಸಿಯಾಗಿರುವ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿ 96 ಸಾವಿರ ರೂಪಾಯಿ ಶಾಲಾ ಶುಲ್ಕ ಪಾವತಿಸಬೇಕಿತ್ತು.
ಶಾಲೆಯಲ್ಲಿ ಪೂರ್ವ ಸಿದ್ಧತೆ ಪರೀಕ್ಷೆ ನಡೆದಿದ್ದು, ಒಂದು ವಿಷಯಕ್ಕೆ ಪರೀಕ್ಷೆ ಬರೆಯಲು ಆಡಳಿತ ಮಂಡಳಿ ಅವಕಾಶ ನೀಡಿ ಮಾರನೇ ದಿನದ ಪರೀಕ್ಷೆಗೆ ಅವಕಾಶ ಕೊಟ್ಟಿರಲಿಲ್ಲ. ಶಾಲಾ ಶುಲ್ಕ ಪಾವತಿಸಿದ ನಂತರ ಪರೀಕ್ಷೆಗೆ ಅವಕಾಶ ನೀಡುವುದಾಗಿ ಹೇಳಿ ವಾಪಸ್ ಕಳುಹಿಸಲಾಗಿದೆ. ವಿದ್ಯಾರ್ಥಿ ಮನೆಗೆ ಬಂದು ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಬೇಸರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.