alex Certify BIG NEWS: ಸರ್ಕಾರದ ಶುಲ್ಕ ಕಡಿತಕ್ಕೆ ಸಿಡಿದೆದ್ದ ಖಾಸಗಿ ಶಾಲೆಗಳು – ಮತ್ತೆ ಪ್ರತಿಭಟನೆಗೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ಶುಲ್ಕ ಕಡಿತಕ್ಕೆ ಸಿಡಿದೆದ್ದ ಖಾಸಗಿ ಶಾಲೆಗಳು – ಮತ್ತೆ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಶೇ.30ರಷ್ಟು ಶುಲ್ಕ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಿಡಿದೆದ್ದಿರುವ ಖಾಸಗಿ ಶಾಲೆಗಳು ಮತ್ತೆ ಪ್ರತಿಭಟನೆಗೆ ಮುಂದಾಗಿವೆ.

ಶುಲ್ಕ ಕಡಿತ ಆದೇಶವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿ, ಕ್ಯಾಮ್ಸ್, ಮಿಕ್ಸಾ, ಕುಸುಮ, ಸಿಬಿಎಸ್ ಇ ಹಾಗೂ ಐಸಿಎಸ್ ಇ ಶಾಲೆಗಳ ಒಕ್ಕೂಟ ಫೆ.23ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್: ಪಾವತಿಸಬೇಕಿದೆ ಸಂಪೂರ್ಣ ಶುಲ್ಕ

ರಾಜ್ಯ ಸರ್ಕಾರ ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಲು ಸೂಚಿಸಿದೆ. ಆದರೆ ಆದೇಶದಲ್ಲಿ ಶೇ.55ರಿಂದ 65 ರಷ್ಟು ಶುಲ್ಕ ಕಡಿತವಾಗುತ್ತದೆ. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಜೊತೆಗೆ ಶಿಕ್ಷಣ ಸಂಸ್ಥೆಗಳಿಗೂ ಹಣ ನೀಡಬೇಕು. 1-5ನೇ ತರಗತಿಗಳನ್ನೂ ಆರಂಭ ಮಾಡಲು ಅವಕಾಶ ನೀಡಬೇಕು. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳನ್ನು ಫೆ.23ರೊಳಗೆ ಈಡೇರಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಫೆ.23ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...