ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಸಾಲ ನೀಡಲು ಬ್ಯಾಂಕ್ ಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ ಯಡಿಯೂರಪ್ಪ, ಬಡವರಿಗಾಗಿ ಜಾರಿಗೊಳಿಸಿರುವ ಈ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕಗಳು ಆದ್ಯತೆ ನೀಡುತ್ತಿಲ್ಲ ಎಂಬ ದೂರು ಕೇಳಿಬಂದಿದೆ. ಎರಡೂ ಯೋಜನೆಗಳ ಪ್ರಗತಿ ರಾಜ್ಯದಲ್ಲಿ ಕುಂಠಿತವಾಗಿದ್ದು, ಸಾಲ ನೀಡುವುದರಲ್ಲಿಯೂ ಕರ್ನಾಟಕ 5ನೇ ಸ್ಥಾನದಲ್ಲಿದೆ. ಬ್ಯಾಂಕ್ ಅಧಿಕಾರಿಗಳ ಈ ವರ್ತನೆ ಸರಿಯಲ್ಲ ಎಂದು ಗುಡುಗಿದ್ದಾರೆ.
ನನಗೆ ಸಚಿವ ಈಶ್ವರಪ್ಪನವರ ಸರ್ಟಿಫಿಕೇಟ್ ಬೇಕಿಲ್ಲ – ಸಿದ್ದರಾಮಯ್ಯ ಆಕ್ರೋಶ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸಿ, ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.