ರಾಜ್ಯದಲ್ಲಿ 9, 10 ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಆರರಿಂದ ಎಂಟನೇ ತರಗತಿಗಳನ್ನು ಕೂಡ ಶೀಘ್ರವೇ ಆರಂಭಿಸಲು ಚಿಂತನೆ ನಡೆದಿದೆ. ಮಾರ್ಚ್ 1 ರಿಂದ 1-5 ನೇ ತರಗತಿಯನ್ನು ಕೂಡ ಆರಂಭಿಸಲು ಯೋಜಿಸಲಾಗಿದೆ.
ಫೆಬ್ರವರಿ 12 ರಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ಟಾಸ್ಕ್ ಫೋರ್ಸ್ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಲೆ ಆರಂಭದ ಕುರಿತಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಆರರಿಂದ ಎಂಟನೇ ತರಗತಿಗಳನ್ನು ಶೀಘ್ರವೇ ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಇದೇ ವೇಳೆ 1 -5 ನೇ ತರಗತಿಗಳನ್ನು ಆರಂಭಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಒಂದರಿಂದ ಐದನೇ ತರಗತಿ ಗಳನ್ನು ಮಾರ್ಚ್ 1ರಿಂದ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.