ಪಾಟ್ನಾ: ಪರೀಕ್ಷೆ ಬರೆಯಲೆಂದು ಲಘುಬಗೆಯಿಂದ ರೆಡಿಯಾಗಿ ತೆರಳುತ್ತಿದ್ದ ಮಹಿಳೆಗೆ ರಸ್ತೆ ಮಧ್ಯೆಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿ, ಬಳಿಕ ಮಹಿಳೆ ಪರೀಕ್ಷೆಗೆ ಹಾಜರಾಗಿರುವ ಘಟನೆ ಬಿಹಾರದ ಮೋತಿಹರ ಜಿಲ್ಲೆಯಲ್ಲಿ ನಡೆದಿದೆ.
ಕಾಜಲ್ ಎಂಬ ಮಹಿಳೆ ತುಂಬು ಗರ್ಭಿಣಿಯಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಇದ್ದುದರಿಂದ ಪರೀಕ್ಷೆ ಬರೆಯಲು ಜಿಲ್ಲಾ ಕೇಂದ್ರಕ್ಕೆ ತೆರಳಲು ವಾಹನದಲ್ಲಿ ಹೋಗುತ್ತಿದ್ದಳು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವನ್ನು ಹೆತ್ತ ಕಾಜಲ್ ತಕ್ಷಣ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆಯನ್ನು ಬರೆದಿದ್ದಾಳೆ.
ಒಂದೇ ಕಾಲೇಜಿನ 40 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ
ಕಾಜಲ್ ಬಾಲಾಕೋಟಿಯ ರಾಮ್ ರೂಪ್ ಬಾಲ್ ದೇವ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಳು. ಇದೀಗ ಮಗುವಿಗೆ ಜನ್ಮ ನೀಡಿ ಕಠಿಣ ಸ್ಥಿತಿಯಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ಬರೆದಿರುವುದು ಶ್ಲಾಘನೀಯ.