ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2 ರಷ್ಟು ದಾಖಲಾಗಿದೆ.
ಬಿಲಾಸ್ ಪುರದಲ್ಲಿ ಭೂಕಂಪನದ ಕೇಂದ್ರಬಿಂದು ಕಂಡುಬಂದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಯಾವುದೇ ಸಾವು, ನೋವು ಉಂಟಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಭಾನುವಾರ ಮಧ್ಯಾಹ್ನ 3.49 ರ ಸುಮಾರಿಗೆ ಮಂಡಿಯಿಂದ ದಕ್ಷಿಣಕ್ಕೆ 30 ಕಿಲೋ ಮೀಟರ್ ಆಳದಲ್ಲಿ ಭೂಕಂಪನವು ಕೇಂದ್ರೀಕೃತವಾಗಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.