42 ಐಎಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಕೋಟ್ಯಂತರ ರೂಪಾಯಿ ಹೋಲ್ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಬಿಜೆಪಿ ಶಾಸಕನೇ ನಿಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಇಂತಹ ಆರೋಪಗಳು ಪ್ರತಿನಿತ್ಯವೂ ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿದಿನ ಇಂತಹ ಆರೋಪ ಕೇಳಿ ಬರುತ್ತಿದ್ದು, ನಿಮಗೆ ರಾಜ್ಯದ ಹಿತಾಸಕ್ತಿ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ. ರಾಜ್ಯದ ಮಾನ ಉಳಿಸಿ ಎಂದು ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.