ನವದೆಹಲಿ: ನಾಳೆಯಿಂದ ಮೂರು ದಿನಗಳ ದೇಶದ ಹಲವೆಡೆ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಪೂರ್ವಭಾರತ, ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳು ಮತ್ತು ಕೇಂದ್ರ ಭಾರತ ಪ್ರದೇಶಗಳಲ್ಲಿ ಮಂಗಳವಾರದಿಂದ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ.
ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಮಡ್, ಸಿಕ್ಕಿಂ, ಮಹಾರಾಷ್ಟ್ರದ ಮಧ್ಯಭಾಗ ಸೇರಿದಂತೆ ಹಲವೆಡೆ ಮಳೆ ಆರ್ಭಟಿಸಲಿದೆ. ಕರ್ನಾಟಕದಲ್ಲಿಯೂ ಇದರ ಪರಿಣಾಮ ಉಂಟಾಗಲಿದ್ದು ರಾಜ್ಯದ ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಪಶ್ಚಿಮ ಬಂಗಾಳ ಒಡಿಶಾ ಸೇರಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಭಾಗದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.