ಬೆಂಗಳೂರು: ಗುಣಮಟ್ಟದ ಶಿಕ್ಷಣ, ನೂತನ ಶಿಕ್ಷಣ ನೀತಿ ಜಾರಿಗೆ ಒತ್ತು ನೀಡಲಾಗಿದ್ದು 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮುಂದಿನ ಬಜೆಟ್ ನಲ್ಲಿ ಹೊಸದಾಗಿ 8000 ಉಪನ್ಯಾಸಕರ ಹುದ್ದೆಗಳ ಮಂಜೂರಾತಿಗೆ ಅವಕಾಶ ಮಾಡಿಕೊಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
12,000 ಬೋಧಕೇತರ ಸಿಬ್ಬಂದಿ ಹುದ್ದೆಗಳ ಮಂಜೂರಾತಿಗೆ ಬೇಡಿಕೆ ಇದೆ. ತುರ್ತು ಅಗತ್ಯದ ಹುದ್ದೆಗಳನ್ನು ಮಂಜೂರು ಮಾಡಿಸಿಕೊಳ್ಳಲು ಇಲಾಖೆ ಆದ್ಯತೆ ನೀಡಿದೆ. ಕೊರೋನಾ ಕಾರಣದಿಂದ ತಡೆಹಿಡಿಯಲಾಗಿದ್ದ 1200 ಸಹಾಯಕ ಪ್ರಾಧ್ಯಾಪಕರು, 330 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಅವಕಾಶ ಮಾಡಿಕೊಡಲು ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.