ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಬಿಹಾರ ಮತ್ತು ಜಾರ್ಖಂಡ್ ನ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್(89) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾದರು.
ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಆರಗದವರಾದ ರಾಮಾಜೋಯಿಸ್ 1932 ಜುಲೈ 27 ರಂದು ಜನಿಸಿದರು. ರಾಜ್ಯಸಭೆ ಸದಸ್ಯರಾಗಿದ್ದರು. ಜಾರ್ಖಂಡ್ ಮತ್ತು ಬಿಹಾರದ ರಾಜ್ಯಪಾಲರಾಗಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿದ್ದರು. ಶಿವಮೊಗ್ಗ, ಬೆಂಗಳೂರಿನಲ್ಲಿ ಅವರು ಶಿಕ್ಷಣ ಪೂರೈಸಿದ್ದು ಕುವೆಂಪು ವಿಶ್ವವಿದ್ಯಾಲಯ ಅವರಿಗೆ ಗೌರವ ಡಿಲೀಟ್ ಪದವಿ ನೀಡಿ ಗೌರವಿಸಿದೆ.