ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಏರ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಶುರುವಾಗಿವೆ. ಸಮೀಕ್ಷೆಯೊಂದರಲ್ಲಿ ಬಿಜೆಪಿ ಹೆಚ್ಚಿನ ಮತ ಗಳಿಸಲಿದೆ ಎಂಬ ವಿಷ್ಯ ಹೊರ ಬಿದ್ದಿದೆ. ಆದರೆ ಈ ಗೆಲುವು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಸಾಕಾಗುವುದಿಲ್ಲವೆಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತ ಗಳಿಕೆ ಶೇಕಡಾ 40 ಕ್ಕೆ ಏರಿಕೆ ಕಂಡಿತ್ತು. ಅಂದಿನಿಂದ ಬಂಗಾಳದಲ್ಲಿ ಬಿಜೆಪಿಯ ರಾಜಕೀಯ ಚಟುವಟಿಕೆಗಳು ಹೆಚ್ಚು ಆಕ್ರಮಣಕಾರಿಯಾಗಿವೆ. ಪ್ರಸ್ತುತ ಸಮೀಕ್ಷೆಯು, ಬಿಜೆಪಿಯ ಮತದ ಸಂಖ್ಯೆ 2016 ರ ವಿಧಾನಸಭಾ ಚುನಾವಣೆಗಿಂತ ಶೇಕಡಾ 26 ರಷ್ಟು ಹೆಚ್ಚಳವಾಗಲಿದೆ ಎನ್ನುತ್ತಿದೆ.
ಆದ್ರೆ ಬಿಜೆಪಿ ಸ್ಥಾನಗಳ ಲೆಕ್ಕಾಚಾರದಲ್ಲಿ ಹಿಂದುಳಿದಿದೆ. ಇಲ್ಲಿ ಟಿಎಂಸಿ ತನ್ನ ಮುನ್ನಡೆ ಕಾಯ್ದುಕೊಂಡಿದೆ. ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ, ಟಿಎಂಸಿಗೆ 151 ಸ್ಥಾನಗಳು ದೊರೆಯುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಬಿಜೆಪಿ 117 ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಮತ್ತು ಎಡ ಮೈತ್ರಿಕೂಟಕ್ಕೆ 24 ಸ್ಥಾನಗಳು, ಇತರರಿಗೆ 2 ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಒಟ್ಟು 294 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಅಂಕಿಅಂಶಗಳನ್ನು ನೋಡಿದರೆ, ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಮತ್ತು ಎಡ ಮೈತ್ರಿಕೂಟದೊಂದಿಗೆ ಕೈಜೋಡಿಸಿದರೆ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚಿದೆ.