ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ವಿವಾದ ಸೃಷ್ಟಿಸಿದ್ದು, ರಾಮ ಮಂದಿರಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ದೇಣಿಗೆ ಕೊಡಲ್ಲ ಎಂದು ಹೇಳಿ ಕಳಿಸಿದೆ ಎಂದಿದ್ದಾರೆ.
ರಾಮ ಮಂದಿರ ಬೇರೆ ಕಡೆ ಕಟ್ಟಿದ್ದರೆ ದೇಣಿಗೆ ನೀಡುತ್ತಿದ್ದೆ. ರಾಮ ಮಂದಿರಕ್ಕೆ ಸಂಗ್ರಹವಾಗುತ್ತಿರುವ ಹಣಕ್ಕೆ ಲೆಕ್ಕ ಕೊಡ್ತಾರಾ? ಈ ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ಹಣ, ಇಟ್ಟಿಗೆ ಸಂಗ್ರಹಿಸಿದ್ದರು. ಸಂಗ್ರಹಿಸಿದ ಇಟ್ಟಿಗೆಗಳನ್ನು ಊರಾಚೆ ಎಸೆದು ಹಣ ತೆಗೆದುಕೊಂಡು ಹೋಗಿದ್ದರು. ಇದೆಲ್ಲ ರಾಮನ ಲೆಕ್ಕ, ಕೃಷ್ಣನ ಲೆಕ್ಕ ಎಂದು ಟೀಕಿಸಿದರು.
ಮತ್ತೆ ಇಬ್ಬರು ಶಾಸಕರ ರಾಜೀನಾಮೆ – ಚುನಾವಣೆ ಹೊಸ್ತಿಲಲ್ಲೇ ಪತನದಂಚಿಗೆ ಬಂದು ನಿಂತ ಕಾಂಗ್ರೆಸ್ ಸರ್ಕಾರ
ಇದೇ ವೇಳೆ ರಾಮ ಮಂದಿರಕ್ಕೆ ದೇಣಿಗೆ ನೀಡದ ಮನೆಗಳಿಗೆ ಮಾರ್ಕ್ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಮನೆಗೆ ಮಾರ್ಕ್ ಮಾಡಿರಬೇಕು ಅದಕ್ಕೆ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.