ಇದೇ ಫೆಬ್ರವರಿ 22 ರಿಂದ ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಕ್ಯೂ. ಗುಣಮಟ್ಟದ ಕಡಲೆಕಾಳನ್ನು ಪ್ರತಿ ಕ್ವಿಂಟಲ್ ಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 5,100 ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ 14 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದ್ದಾರೆ.
ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಖರೀದಿಸಲಾಗುತ್ತದೆ.
ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ನೂಲ್ವಿ, ಹೆಬಸೂರು, ಕೋಳಿವಾಡ ಉಪ ಮಾರುಕಟ್ಟೆ ಪ್ರಾಂಗಣ ಮತ್ತು ಧಾರವಾಡದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ಹೆಬ್ಬಳ್ಳಿ, ಉಪ್ಪಿನಬೆಟಗೇರಿ ಉಪ ಮಾರುಕಟ್ಟೆ ಮತ್ತು ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣ, ನವಲಗುಂದ, ತಿರ್ಲಾಪುರ, ಮೊರಬ ಉಪಮಾರುಕಟ್ಟೆ ಪ್ರಾಂಗಣ ಮತ್ತು ಕುಂದಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ಯರಗುಪ್ಪಿ ಮತ್ತು ಯಲಿವಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಾಂಗಣ ಕೇಂದ್ರಗಳಲ್ಲಿ ಕಡಲೆಕಾಳನ್ನು ರೈತರಿಂದ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.
https://www.facebook.com/pralhadvjoshi/posts/3827687457288457