ಬೆಂಗಳೂರು: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ರಾಘವೇಂದ್ರ ರಾಜಕುಮಾರ್ ದಾಖಲಾಗಿದ್ದಾರೆ. ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ರಾಘವೇಂದ್ರ ರಾಜಕುಮಾರ್ ಅವರಿಗೆ ಸದ್ಯದ ಮಾಹಿತಿ ಪ್ರಕಾರ ಯಾವುದೇ ಗಂಭೀರ ಸಮಸ್ಯೆ ಇಲ್ಲ. ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಟ ಹಾಗೂ ಅವರ ಸಹೋದರ ಶಿವರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಮೊದಲು ಇದೇ ಆಸ್ಪತ್ರೆಯಲ್ಲಿ ರಾಘವೇಂದ್ರ ರಾಜಕುಮಾರ್ ಚಿಕಿತ್ಸೆ ಪಡೆದಿದ್ದರು. ಬೆಳಗ್ಗೆಯಿಂದ ಅವರು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.