ಚಿಕ್ಕಮಗಳೂರು: ರೈತರ 10 ಹೆಚ್.ಪಿ. ಪಂಪ್ ಸೆಟ್ ಗಳಿಗೆ ಉಚಿತವಾಗಿ ನಿರಂತರವಾಗಿ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಹಳಸೆ ಕಾಫಿ ಕೋರ್ಟಿನಲ್ಲಿ ನೂತನ ಅತಿಥಿಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗಾರರಿಗೆ ವಿದ್ಯುತ್ ಸಮಸ್ಯೆ ಎದುರಾಗದಂತೆ ರೈತರ 10 ಹೆಚ್.ಪಿ. ಪಂಪ್ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರದಿಂದ ಉಚಿತ, ನಿರಂತರವಾಗಿ ವಿದ್ಯುತ್ ಪೂರೈಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಕಾಫಿ ಬೆಳೆಗಾರರಿಗೆ ಶೇಕಡ 5 ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.