ಬೆಳಗಾವಿ: ಕೆ.ಪಿ.ಎಸ್.ಸಿ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ವರ್ಷ ಕೋಚಿಂಗ್ ಸೆಂಟರ್ ಬಂದ್ ಮಾಡಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಸಮಾರಾಧನೆ ವೇಳೆಯಲ್ಲೇ ಮೃತ ವ್ಯಕ್ತಿ ಪ್ರತ್ಯಕ್ಷ…!
ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಶಿವಲಿಂಗ ಮತ್ತೋರ್ವ ಆರೋಪಿ ರಾಚಪ್ಪನಿಂದ ಪಡೆದ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ಒದಗಿಸುತ್ತಿದ್ದ ಎನ್ನಲಾಗಿದೆ. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.