ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಸಮುದಾಯಗಳಿಂದ ಹೋರಾಟ ನಡೆದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ.
ಪಂಚಮಸಾಲಿ, ಕುರುಬರು, ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳಿಂದ ಮೀಸಲಾತಿ ವಿಚಾರವಾಗಿ ಬೇಡಿಕೆ ಇಡಲಾಗಿದ್ದು, ಇದೇ ವೇಳೆ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿಗೆ ಬೇಡಿಕೆ ಇಡಲಾಗಿದೆ.
ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಧ್ವನಿಯೆತ್ತಿದ್ದಾರೆ. ಒಕ್ಕಲಿಗರ ಹಿತರಕ್ಷಣೆಗೆ ಮೀಸಲಾತಿ ಅನಿವಾರ್ಯವಾಗಿದೆ. ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಹೇಳಿದ್ದಾರೆ.
115 ಉಪಜಾತಿಗಳನ್ನು ಓಬಿಸಿ ಪಟ್ಟಿಗೆ ಸೇರಿಸಬೇಕು. ಅನೇಕ ಉಪ ಜಾತಿಗೆ ಸರ್ಕಾರದ ಸೌಲಭ್ಯ ಸಿಕ್ಕಿಲ್ಲ ಎಂದು ಶೀಗಳು ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಧ್ವನಿ ಎತ್ತಿದ್ದಾರೆನ್ನಲಾಗಿದೆ.