ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮ್ಯಾರಥಾನ್ ಮೀಟಿಂಗ್ ನಡೆಸಲಿದ್ದಾರೆ. 9 ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು, 9 ಇಲಾಖೆಗಳಿಂದ ಬಜೆಟ್ ಪೂರ್ವಭಾವಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಬಜೆಟ್ನಲ್ಲಿ ಇಲಾಖೆಗಳಿಗೆ ಅನುದಾನ, ಯೋಜನೆಗಳು ಕುರಿತಾಗಿ ಸಭೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.30 ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ, ವಿವಿಧ ಸಮುದಾಯಗಳಿಂದ ಮೀಸಲಾತಿಗೆ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.