ವಾಯುಮಾಲಿನ್ಯ ಇಂದು ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಕೂಡ ಇದಕ್ಕೆ ಹೊರತಲ್ಲ. ಉದ್ಯಾನಗಳ ನಗರಿ ಎಂಬ ಹೆಗ್ಗಳಿಕೆ ಹೊಂದಿದ್ದ ಬೆಂಗಳೂರು, ಈಗ ಕಾಂಕ್ರೀಟ್ ಕಾಡಾಗಿ ಬೆಳೆಯುತ್ತಿದ್ದು, ದಿನೇ ದಿನೇ ಏರಿಕೆಯಾಗುತ್ತಿರುವ ವಾಹನಗಳ ಸಂಖ್ಯೆಯೂ ಸಹ ವಾಯುಮಾಲಿನ್ಯಕ್ಕೆ ತನ್ನದೇ ಆದ ಕಾಣಿಕೆ ನೀಡುತ್ತಿದೆ.
ಇದರ ಮಧ್ಯೆ ಗ್ರೀನ್ ಪೀಸ್ ಆಗ್ನೇಯ ಏಷ್ಯಾ ಬಿಡುಗಡೆ ಮಾಡಿರುವ ಐಕ್ಯೂ ಏರ್ ಡೇಟಾ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಹಿರಂಗವಾಗಿದ್ದು, ಕಳೆದ ವರ್ಷ ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದ 12 ಸಾವಿರ ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಮೊದಲ ಸ್ಥಾನದಲ್ಲಿದ್ದು, ಅಲ್ಲಿ 54 ಸಾವಿರ ಜನ ಪ್ರಾಣ ಕಳೆದುಕೊಂಡಿದ್ದಾರೆ.
ಹಿಂದಿನ ಸರ್ಕಾರಗಳು ಎಸಗಿದ್ದ ಪ್ರಮಾದವನ್ನು ಸರಿಪಡಿಸುತ್ತಿದ್ದೇವೆ ಅಂದ್ರು ಪ್ರಧಾನಿ ಮೋದಿ
ಇನ್ನುಳಿದಂತೆ ಚೆನ್ನೈ ಮತ್ತು ಹೈದರಾಬಾದ್ ನಲ್ಲಿ ತಲಾ 11,000 ಮಂದಿ, ಲಕ್ನೋದಲ್ಲಿ 6,700 ಮಂದಿ ಸಾವನ್ನಪ್ಪಿದ್ದಾರೆ ಎಂದು ಈ ಅಧ್ಯಯನ ವರದಿ ಹೇಳಿದೆ. ಗಾಳಿಯಲ್ಲಿ ಪಿಎಂ 2.5 ಕಣಗಳು ಅಧಿಕ ಪ್ರಮಾಣದಲ್ಲಿರುವುದೇ ಸಾವಿಗೆ ಕಾರಣ ಎಂದು ತಿಳಿಸಲಾಗಿದೆ.