ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ, ಲಿಂಗಾಯಿತ, ಕುರುಬ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟ ಹೆಚ್ಚಿದ ಬೆನಲ್ಲೇ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಎಲ್ಲಾ ಸಮುದಾಯಗಳಿಗೂ ನ್ಯಾಯ ಕೊಡಿಸುವುದು ಸರ್ಕಾರದ ಆಶಯವಾಗಿದೆ ಎಂದರು.
ಎಲ್ಲಾ ಸಮುದಾಯಗಳೂ ಮೀಸಲಾತಿಗಾಗಿ ಹೋರಾಡುತ್ತಿವೆ. ನೊಂದ ಸಮುದಾಯಗಳಿಗೆ ಮೀಸಲಾತಿ ಸಿಗುತ್ತದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಎಲ್ಲಾ ಸಚಿವರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಸಂವಿಧಾನದ ಆಶಯದಂತೆ ನೊಂದವರಿಗೆ ಮೀಸಲಾತಿ ಸಿಗಲಿದೆ. ಕಾನೂನು ಚೌಕಟ್ಟಿನಲ್ಲಿ ಪರಿಶೀಲನೆ ನಡೆದಿದೆ ಎಂದು ಹೇಳಿದರು.
ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್
ಸಚಿವರಾಗಲಿ, ಶಾಸಕರಾಗಲಿ ಮೀಸಲಾತಿ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಬಾರದು. ಏನೇ ಅಭಿಪ್ರಾಯ, ಅಸಮಾಧಾನಗಳಿದ್ದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಗಮನಕ್ಕೆ ತರಬೇಕು ಎಂದು ಹೇಳಿದರು.