alex Certify ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯ: LPG ಗ್ಯಾಸ್ ಬದಲು ವಿದ್ಯುತ್ ಒಲೆಗೆ ಸಬ್ಸಿಡಿ, ಪೆಟ್ರೋಲ್ ಬದಲು ಎಲೆಕ್ಟ್ರಿಕ್ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯ: LPG ಗ್ಯಾಸ್ ಬದಲು ವಿದ್ಯುತ್ ಒಲೆಗೆ ಸಬ್ಸಿಡಿ, ಪೆಟ್ರೋಲ್ ಬದಲು ಎಲೆಕ್ಟ್ರಿಕ್ ವಾಹನ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವಂತೆ ಅವರು ಸಲಹೆ ನೀಡಿದ್ದಾರೆ.

ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಚಿವರು ಸಲಹೆ ನೀಡಿದ್ದಾರೆ.

ಸಚಿವರ ಲೆಕ್ಕಾಚಾರದ ಪ್ರಕಾರ, ದೆಹಲಿಯಲ್ಲಿ 10,000 ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ಸುಮಾರು 30 ಕೋಟಿ ರೂಪಾಯಿಯಷ್ಟು ಉಳಿತಾಯವಾಗಬಹುದು. ಎಲೆಕ್ಟ್ರಿಕ್ ಅಡುಗೆ ಉಪಕರಣಗಳನ್ನು ಬಳಸುವುದರಿಂದ ಆಮದು ಮಾಡಿದ ಅಡುಗೆ ಅನಿಲ ದರಕ್ಕಿಂತ ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಬಹುದು ಎಂದು ಹೇಳಲಾಗಿದೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಸಚಿವ ಗಡ್ಕರಿ, ನಾವು ವಿದ್ಯುತ್ ಉಪಕರಣಗಳಿಗೆ ಏಕೆ ಸಬ್ಸಿಡಿ ಕೊಡಬಾರದು? ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ.

ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕೆಂದು ಸಲಹೆ ನೀಡಿದ್ದಾರೆ. ವಿದ್ಯುತ್ ಸಚಿವ ಆರ್.ಕೆ. ಸಿಂಗ್ ಅವರಿಗೆ ಸಲಹೆ ನೀಡಿದ ನಿತಿನ್ ಗಡ್ಕರಿ, ತಮ್ಮ ಇಲಾಖೆಗಳ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...