alex Certify BIG NEWS: ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಪತ್ತೆ – 1,56,302 ಜನರು ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಪತ್ತೆ – 1,56,302 ಜನರು ಸೋಂಕಿಗೆ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,264 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,91,651ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 90 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,302ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,45,634 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,89,715 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,667 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,10,85,173 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...