alex Certify ಬೆಳೆವಿಮೆ ಪರಿಹಾರ, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆವಿಮೆ ಪರಿಹಾರ, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಸಮೀಕ್ಷೆ ವಿವರಗಳ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ನೋಂದಾವಣಿ ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ತಿರಸ್ಕೃತಗೊಂಡ ನೋಂದಾವಣಿ ಕುರಿತು ಆಕ್ಷೇಪಣೆ ಇದ್ದಲ್ಲಿ ರೈತರು ಮರು ಪರಿಶೀಲನೆಗಾಗಿ ಲಿಖಿತವಾಗಿ ಮನವಿ ಸಲ್ಲಿಸಬಹುದು. ಮಾರ್ಚ್ 4 ಆಕ್ಷೇಪಣೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ವಿಮಾ ಪರಿಹಾರ ಪಡೆಯಲು ಅರ್ಹರಿದ್ದು ಬೆಳೆ ಸಮೀಕ್ಷೆ ವಿವರಗಳನ್ನು ಬೆಳೆ ವಿಮೆ ವಿವರಗಳೊಂದಿಗೆ ಹೋಲಿಕೆ ಮಾಡಿದ ನಂತರ ತಾಳೆಯಾಗದೆ ಕೆಲವೊಂದು ನೊಂದಣಿ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಕಂಪನಿಯವರು ತಿರಸ್ಕರಿಸಿದ ವಿಮಾ ಮೊತ್ತವನ್ನು ಜಮೆ ಮಾಡಿರುವುದಿಲ್ಲ.

ಈ ರೀತಿಯಾಗಿ ಹೆಚ್ಚಿನ ವಿವರಗಳಿಗಾಗಿ ಸಂಬಂಧಿತ ತಾಲ್ಲೂಕ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...