ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರಾವತಿ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.
ಈ ಹಿಂದೆ ಜಿಲ್ಲಾಡಳಿತ ಅಮರಾವತಿಯಲ್ಲಿ ವಾರಾಂತ್ಯ ಲಾಕ್ಡೌನ್ ಘೋಷಿಸಿತ್ತು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಲಾಕ್ಡೌನ್ ಘೋಷಿಸಲಾಗಿದ್ದು, ಅದನ್ನು ಒಂದು ವಾರದವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.
ಸಚಿವೆ ಯಶೋಮತಿ ಠಾಕೂರ್ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಚಲ್ ನಗರವನ್ನು ಹೊರತುಪಡಿಸಿ ಅಮರಾವತಿ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಲಾಕ್ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಅನುಮತಿ ಇರುತ್ತದೆ.
ಮಹಾರಾಷ್ಟ್ರದಲ್ಲಿ ಸತತ ಎರಡನೇ ದಿನ 6000ಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 6281 ಹೊಸ ಪ್ರಕರಣಗಳಲ್ಲಿ 1700ಕ್ಕೂ ಹೆಚ್ಚು ಪ್ರಕರಣಗಳು ಮುಂಬೈ ಮತ್ತು ಅಮರಾವತಿ ಪುರಸಭೆ ನಿಗಮ ಪ್ರದೇಶಗಳಲ್ಲಿ ದಾಖಲಾಗಿವೆ. ಹೀಗೆ ಕೊರೋನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಜಾರಿ ಮಾಡಲಾಗಿದೆ.