ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಅಮರಾವತಿ ಮತ್ತು ಪುಣೆಯಲ್ಲಿ ಸೋಂಕು ತಡೆಗೆ ಹಲವು ನಿಬಂಧನೆ ವಿಧಿಸಲಾಗಿದೆ. ನಾಗ್ಪುರ ಜಿಲ್ಲೆಯಲ್ಲಿ ಕೂಡ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 7 ರವರೆಗೆ ಶಾಲಾ-ಕಾಲೇಜು ತರಬೇತಿ ಕೇಂದ್ರಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.
ಇಂಧನ ಹಾಗೂ ನಾಗ್ಪುರ ಜಿಲ್ಲಾ ಉಸ್ತುವಾರಿ ಸಚಿವ ನಿತಿನ್ ರಾವತ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 7 ರವರೆಗೆ ಜಿಲ್ಲೆಯಲ್ಲಿ ಶಾಲಾ, ಕಾಲೇಜು, ಕೋಚಿಂಗ್ ಸೆಂಟರ್, ಕಲ್ಯಾಣ ಮಂದಿರ ಬಂದ್ ಮಾಡಲಾಗುವುದು. ವಾರಾಂತ್ಯದಲ್ಲಿ ದೊಡ್ಡ ಮಾರ್ಕೆಟ್ ಬಂದ್ ಮಾಡಲಾಗುವುದು. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಶೇಕಡ 50ರಷ್ಟು ಗ್ರಾಹಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.