ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತಂತೆ ಹಿಂದುಳಿದ ವರ್ಗದ ಆಯೋಗದ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು.
ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗ ತನ್ನದೇ ಆದ ರೀತಿಯಲ್ಲಿ ಅಧ್ಯಯನ ನಡೆಸಿ ಮೀಸಲಾತಿ ನೀಡುವ ಬಗ್ಗೆ ನಿರ್ಧರಿಸುತ್ತದೆ. ಕಾನೂನು ಮತ್ತು ಸಂವಿಧಾನಬದ್ಧವಾಗಿ ಆಯೋಗದಿಂದಲೇ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.