ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಎರಡು ದಿನ ತೈಲಬೆಲೆಯಲ್ಲಿ ಬದಲಾವಣೆಯಾಗಿರಲಿಲ್ಲ.
ಇಂದು ಮತ್ತೆ ತೈಲ ಬೆಲೆಯನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್ ಪ್ರತಿ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 90.83 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಗೆ 81.32 ರೂಪಾಯಿ ದರ ಇದೆ.