ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸ್ಫೋಟದಲ್ಲಿ 6 ಜನರು ಮೃತಪಟ್ಟಿದ್ದಾರೆ. ಇದು ದೊಡ್ಡ ಪ್ರಮಾಣದ ಸ್ಫೋಟವಾಗಿದ್ದು, ಮೃತ ದೇಹಗಳು ಸಂಪೂರ್ಣ ಛಿದ್ರ ಛಿದ್ರಗೊಂಡಿವೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗುವುದು ಎಂದರು.
ಮದುವೆಯಿಂದ ಬರುವಾಗಲೇ ಘೋರ ದುರಂತ: ಮರಳು ಲಾರಿ ಡಿಕ್ಕಿ – ಆಟೋದಲ್ಲಿದ್ದ ಐದು ಮಂದಿ ಸಾವು
ಜಿಲೆಟಿನ್ ಸ್ಫೋಟದ ಬಗ್ಗೆ ಸಂಪೂರ್ಣ ತನಿಖೆಯಾಗುವ ಅಗತ್ಯವಿದೆ. ಈಗಾಗಲೇ ಭ್ರಮರವರ್ಷಿಣಿ ಕಲ್ಲು ಕ್ವಾರಿಯ ಮೂವರು ಮಾಲೀಕರನ್ನು ಬಂಧಿಸುವಂತೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ದುರಂತದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕ್ವಾರಿ ಮಾಲೀಕರು, ಸ್ಫೋಟ ಮಾಡಿದವರು, ಅಧಿಕಾರಿಗಳು, ಸ್ಥಳೀಯ ಪೊಲೀಸ್ ಅಧಿಕಾರಿಗಳ ಕುರಿತು ತನಿಖೆಯ ಅಗತ್ಯವಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.