ನವದೆಹಲಿ: ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಪ್ರಚೋದನೆ ನೀಡುವ ಟೂಲ್ ಕಿಟ್ ನ್ನು ಸಿದ್ಧಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಿಶಾ ರವಿಯನ್ನು ಫೆ.13ರಂದು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ದೆಹಲಿ ಪಟಿಯಾಲಾ ಹೌಸ್ ಕೋರ್ಟ್ ದಿಶಾ ರವಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ.
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಯಾವ ರೀತಿ ಬೆಂಬಲ ನೀಡಬೇಕು ಎಂಬುದನ್ನು ವಿವರಿಸುವ ಟೂಲ್ ಕಿಟ್ ನ್ನು ಸಿದ್ಧಪಡಿಸಿ ಅದನ್ನು ಅಂತರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಅವರಿಗೆ ಕಳುಹಿಸಿದ ಆರೋಪ ದಿಶಾ ಮೇಲಿದ್ದು, ಇದೇ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.