ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಮೊದಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳ ವೈಫಲ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಅಕ್ರಮ ಸ್ಫೋಟಕಗಳ ಸಾಗಾಟ ತಡೆಯುವಲ್ಲಿ ವಿಫಲವಾಗಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು. ಕ್ರಷರ್, ಕ್ವಾರಿ ಮಾಲೀಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.