ನರೇಂದ್ರ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷಗಳ ಕಾಲ ಮುಂದುವರೆದರೆ ದೇಶದ 10 ಕೋಟಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಮುಗಿಲು ಮುಟ್ಟಿದ್ದು, ಮುಂದಿನ ದಿನಗಳಲ್ಲಿ ಹಸಿವು ಬಡತನ ತಾಳಲಾರದೆ ಜನ ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂದು ಹೇಳಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಡುಗೆ ಅನಿಲ ಬೆಲೆ 5 ರೂಪಾಯಿ ಏರಿಕೆಯಾಗಿದ್ದಕ್ಕೆ ತಲೆ ಮೇಲೆ ಸಿಲಿಂಡರ್ ಹೊತ್ತು ಬೀದಿಗೆ ಬರುತ್ತಿದ್ದ ಸ್ಮೃತಿ ಇರಾನಿ ಹಾಗೂ ಶೋಭಾ ಕರಂದ್ಲಾಜೆ ಈಗ ಎಲ್ಲಿ ಹೋಗಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.