ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 334 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 313 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದುವರೆಗೆ 9,30,778 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,49,183 ಕ್ಕೆ ಏರಿಕೆಯಾಗಿದೆ. 6077 ಸಕ್ರಿಯ ಪ್ರಕರಣಗಳು ಇದ್ದು, 122 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ ಆರು ಜನರು ಮೃತಪಟ್ಟಿದ್ದಾರೆ. ಇದುವರೆಗೆ 12,309 ಸೋಂಕಿತರು ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 174 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದಕ್ಕಿಂತ ಹೆಚ್ಚು ಜನರಿಗೆ ಸೋಂಕು ತಗಲಿದ್ದು, ತಾಂತ್ರಿಕ ಕಾರಣದಿಂದ ಸೋಂಕಿತರ ಸೇರ್ಪಡೆ ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,04,357 ಕ್ಕೆ ಏರಿಕೆಯಾಗಿದೆ. ಇವತ್ತು 171 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,95,515 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4379 ಸಕ್ರಿಯ ಪ್ರಕರಣಗಳು ಇವೆ. ಇವತ್ತು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4462 ಜನ ಸೋಂಕಿತರು ಮೃತಪಟ್ಟಿದ್ದಾರೆ.