ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಅವರು ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ. 28 ರ ಭಾನುವಾರ ಬೆಳಗ್ಗೆ 9.30 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 10.55ಕ್ಕೆ ಸೊರಬಕ್ಕೆ ಆಗಮಿಸಲಿದ್ದಾರೆ. ನಂತರ ಬೆಳಗ್ಗೆ 11 ಕ್ಕೆ ಆನವಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೊರಬ ತಾಲೂಕಿನ ಮೂಗೂರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ1.15ಕ್ಕೆ ಸೊರಬದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ನಗರದ ಆಲ್ಕೊಳ ಸರ್ಕಲ್ ಹತ್ತಿರದ ಗೋಪಾಲಗೌಡ ಬಡಾವಣೆಯಲ್ಲಿರುವ ಮೆಡಿಕಲ್ ಶಾಪ್ ಅಸೋಸಿಯೇಷನ್ಸ್ ಔಷಧ ಭವನ ಉದ್ಘಾಟನೆ ನೆರವೇರಿಸುವರು.
ಸಂಜೆ 6 ಗಂಟೆಗೆ ನಗರದ ಹಳೇ ಜೈಲು ಆವರಣದಲ್ಲಿ ಜಿಲ್ಲಾಡಳಿತ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ. ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡ ಬಹು ಉಪಯುಕ್ತತಾ ಸ್ಥಳದ ಅಭಿವೃದ್ಧಿಯ ಭಾಗಶಃ ಅನುಷ್ಠಾನ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಸಂಜೆ 6.30ಕ್ಕೆ ಹಳೇ ಜೈಲು ಆವರಣದಲ್ಲಿ ಬಿ.ಎಸ್. ಯಡಿಯೂರಪ್ಪನವರ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಮುಖ್ಯಮಂತ್ರಿಯವರಿಗೆ “ನಮ್ಮೊಲುಮೆ” ಅಭಿಮಾನದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮಾ. 1 ರಂದು ಸೋಮವಾರ ಬೆಳಗ್ಗೆ 9ಕ್ಕೆ ನಗರದ ವಿನೋಬನಗರ ಗೆಜ್ಜೆನಹಳ್ಳಿ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.15 ಶಿವಮೊಗ್ಗ ಮಹಾನಗರ ಪಾಲಿಕೆಯ ಹತ್ತಿರ ಎನ್.ಡಿ.ವಿ.ಹಾಸ್ಟೆಲ್ ಕಟ್ಟಡ ನಿರ್ಮಣಕ್ಕೆ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.