ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಹಾಗೂ ಜನಸಾಮಾನ್ಯರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಕೆಪಿಸಿಸಿ ಮಹಿಳಾ ಅಧ್ಯಕ್ಷ ಪುಷ್ಪಾ ಅಮರ್ ನಾಥ್ ಹಾಗೂ ಪಕ್ಷದ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.
ಮಾರ್ಚ್ 2 ರಂದು ಬೆಳಗ್ಗೆ 11 ಗಂಟೆಗೆ ಸಿಟಿ ರೈಲ್ವೆ ನಿಲ್ದಾಣದ ಬಳಿಯಿರುವ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೌರ್ಯ ವೃತ್ತದ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಲಾಗುವುದು.