ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕೈಗೊಂಡಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಫಲಾನುಭವಿಗಳ ಮನೆಗೆ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ. ಕೊರೊನಾ ಕಾರಣದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿದ್ದವು. ಇದರಿಂದ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿತ್ತು. ಇದನ್ನು ಮನಗಂಡ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಮೂಲಕ ಆಹಾರವನ್ನು ಪೂರೈಸಲು ಕ್ರಮಕೈಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 1723 ಅಂಗನವಾಡಿಗಳಿದ್ದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಮೊಟ್ಟೆ, ಹಾಲು, ಪೌಷ್ಟಿಕ ಆಹಾರಗಳನ್ನು ಮನೆಬಾಗಿಲಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.