ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಒಂದೆಡೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಸಾರಿಗೆ ನೌಕರರು ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ. ಮತ್ತೊಂದೆಡೆ ಬೆಲೆ ಏರಿಕೆ ನೀತಿ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಸೇವಾ ಹಿರಿತನದ ಆಧಾರದ ಮೇಲೆ ಗೌರವ ಧನ ಹೆಚ್ಚಳ, ಎಲ್ ಕೆ ಜಿ, ಯುಕೆಜಿ ಅಂಗನವಾಡಿಯಲ್ಲೇ ಆರಂಭಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ನೋಡುಗರನ್ನು ಬೆಚ್ಚಿಬೀಳಿಸುವಂತಿದೆ ಯುವಕನ ವಿಡಿಯೋ
ಸಾರಿಗೆ ನೌಕರರಿಗೆ 6ನೇ ವೇತನ ಆಯೋಗ ಜಾರಿಮಾಡಿ ಬಜೆಟ್ ನಲ್ಲಿ ಘೋಷಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮೌರ್ಯ ವೃತ್ತದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ನಾಲ್ಕು ನಿಗಮದ ಸಾರಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಅಡುಗೆ ಅನಿಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ತರಕಾರಿ ಹಾರ ಹಾಕಿಕೊಂಡು, ತಲೆಯ ಮೇಲೆ ಅಣುಕು ಸಿಲಿಂಡರ್ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಧಾನಿಯಲ್ಲಿ ಪ್ರತಿಭಟನೆ ಕಿಚ್ಚಿನ ಬೆನ್ನಲ್ಲೇ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.