ಬೆಂಗಳೂರು: ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್ ವರ್ತನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಬಹುದಾಗಿದೆ ಎಂದು ಕಿಡಿಕಾರಿದ್ದಾರೆ.
ಕೊರೊನಾ ಮಾರ್ಗಸೂಚಿಯನ್ನೂ ಪಾಲಿಸದೇ ಬಿ.ಸಿ.ಪಾಟೀಲ್ ಮನೆಗೆ ಆಸ್ಪತ್ರೆ ಸಿಬ್ಬಂದಿ ಕರೆಸಿ ಲಸಿಕೆ ಹಾಕಿಸಿಕೊಂಡಿದ್ದು, ಸಚಿವರ ನಡೆಗೆ ಸರ್ಕಾರದ ಸಚಿವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಮಾಜಿ ಸಿಎಂ, ಕುಮಾರಸ್ವಾಮಿ ಈ ಸರ್ಕಾರಲ್ಲಿ ಯಾರು ಏನು ಬೇಕಾದರೂ ಮಾಡಬಹುದಾಗಿದೆ. ಸಚಿವರ ವೈಖರಿಗಳು ಹಾಗಿವೆ ಎಂದು ಗುಡುಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ
ಇನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದು, ಯಾರೂ ಕೂಡ ಮನೆಯಲ್ಲಿ ಲಸಿಕೆ ತೆಗೆದುಕೊಳ್ಳಬಾರದು. ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.