ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಸಹೋದರಿ ರಂಗೋಲಿ ಮುಂಬೈನಲ್ಲಿ ಮೂರು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಈಗ ಕಂಗನಾ ರಣಾವತ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಜೀವ ಬೆದರಿಕೆಯಿದ್ದು, ಪ್ರಕರಣವನ್ನು ಮುಂಬೈನಿಂದ ಹಿಮಾಚಲ ಪ್ರದೇಶಕ್ಕೆ ವರ್ಗಾಯಿಸುವಂತೆ ಕಂಗನಾ ರಣಾವತ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಂಬೈನಲ್ಲಿ ಪ್ರಕರಣದ ತನಿಖೆ ಮುಂದುವರಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ ಎಂದು ಕಂಗನಾ ಹೇಳಿದ್ದಾರೆ.
ಕಂಗನಾ ರಣಾವತ್ ಮತ್ತು ಸಹೋದರಿ ರಂಗೋಲಿ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ನಟಿ ಕಂಗನಾ ರಣಾವತ್ ವಿರುದ್ಧ ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್, ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
ಈ ಮಧ್ಯೆ ಶಿವಸೇನೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದೆ ಎಂದು ಕಂಗನಾ ಹೇಳಿದ್ದಾರೆ. ಅಷ್ಟೇ ಅಲ್ಲ ಮುಂಬೈನಲ್ಲಿ ತಮ್ಮ ಜೀವಕ್ಕೆ ಅಪಾಯವಿದೆ ಎಂದವರು ಹೇಳಿದ್ದಾರೆ. ಕಂಗನಾ ಶಿವಸೇನೆ ಮುಖಂಡರ ವಿರುದ್ಧ ಅನೇಕ ಗಂಭೀರ ಆರೋಪಗಳನ್ನು ಮಾಡಿದ್ದಾರೆ.