ಸದಾ ವಿವಾದಗಳಿಂದಲೇ ಸುದ್ದಿ ಮಾಡುತ್ತಿರುವ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈನಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಕರ್ನಾಟಕದ ತುಮಕೂರಿನಲ್ಲೂ ಕಂಗನಾ ವಿರುದ್ಧ ದೂರು ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಟಿ ಕಂಗನಾಗೆ ಈಗ ಸಂಕಷ್ಟ ಎದುರಾಗಿದೆ.
ಕಂಗನಾ ವಿರುದ್ಧ ತುಮಕೂರು ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ತಡೆ ನೀಡುವಂತೆ ಕಂಗನಾ ರಣಾವತ್ ಪರ ವಕೀಲ ರಿಜ್ವಾನ್ ಸಿದ್ದಿಕಿ ಹೈಕೋರ್ಟ್ ನಲ್ಲಿ ಮನವಿ ಮಾಡಿದ್ದು ಆದರೆ ಇದಕ್ಕೆ ನಿರಾಕರಿಸಿರುವ ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದೆ.
ಟ್ವೀಟಿಗರನ್ನ ಗೊಂದಲಕ್ಕೀಡು ಮಾಡಿದ ‘ಸೈನಾ’ ಸಿನಿಮಾದ ಪೋಸ್ಟರ್…!
ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ತುಮಕೂರು ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ವಿಚಾರಣೆ ಆರಂಭವಾದರೆ ಕಂಗನಾ ನ್ಯಾಯಾಲಯಕ್ಕೆ ಹಾಜರಾಗುವುದು ಅನಿವಾರ್ಯವಾಗಲಿದೆ.