alex Certify ರಾಸಲೀಲೆ ಸಿಡಿ ಪ್ರಕರಣ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ – ಶಾಸಕ ಬಾಲಚಂದ್ರ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಸಲೀಲೆ ಸಿಡಿ ಪ್ರಕರಣ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯವಿಲ್ಲ. ನಕಲಿ ಸಿಡಿಗಳಿಗೆ ರಾಜೀನಾಮೆ ನೀಡುತ್ತಾ ಹೋದರೆ ಸಂಪುಟವೇ ಇರುವುದಿಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಡಿದ ಬಾಲಚಂದ್ರ ಜಾರಕಿಹೊಳಿ ಪ್ರಕರಣದ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ. ವಕೀಲರ ಭೇಟಿಗೆ ತೆರಳುತ್ತಿದ್ದೇವೆ. ಇದೊಂದು ಸೃಷ್ಟಿ ಮಾಡಿರುವ ನಕಲಿ ಸಿಡಿ. ಈ ಬಗ್ಗೆ 100 ಕೋಟಿ ರೂಪಾಯಿ ಮಾನನಷ್ಟ ಮೊಖದ್ದಮೆ ದಾಖಲಿಸುತ್ತೇವೆ. ಓರ್ವ ಸಚಿವರ ವಿರುದ್ಧ ಅನಗತ್ಯವಾದ ಆರೋಪ ಮಾಡಲಾಗಿದೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದರು.

ನಮ್ಮ ಕುಟುಂಬದ ವಿರುದ್ಧ ಕಾಣದ ಕೈಗಳು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿಯ ಎಲ್ಲಾ ಶಾಸಕರು, ಸಚಿವರು ರಮೇಶ್ ಜೊತೆಗಿದ್ದೇವೆ. ಅವರು ರಾಜೀನಾಮೆ ಕೊಡಬೇಕಾಗಿಲ್ಲ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...