ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ದಿ.ಜಯಲಲಿತಾ ಪರಮಾಪ್ತೆ ವಿ.ಕೆ. ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿರುವುದಾಗಿ ತಿಳಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ವಿ.ಕೆ.ಶಶಿಕಲಾ ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆ ಹೊತ್ತಲ್ಲೇ ಶಶಿಕಲಾ ಬಿಡುಗಡೆಯಾಗಿರುವುದು ಅವರ ಬೆಂಬಲಿಗರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿತ್ತು. ಅಲ್ಲದೇ ತಮಿಳುನಾಡು ರಾಜಕೀಯದಲ್ಲಿ ಚಿನ್ನಮ್ಮನ ರಾಜಕೀಯ ಪರ್ವ ಆರಂಭವಾಗಲಿದೆ ಎಂದೇ ಹೇಳಲಾಗಿತ್ತು. ಆದರೆ ಈಗ ದಿಢೀರ್ ಆಗಿ ರಾಜಕೀಯಕ್ಕೆ ಗುಡ್ ಬೈ ಹೇಳುವ ಮೂಲಕ ಶಾಕ್ ನೀಡಿದ್ದಾರೆ.
ತಾವು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿರುವುದಾಗಿ ಶಶಿಕಲಾ ನಟರಾಜನ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.