ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗುತ್ತಿದೆ.
ಈ ಮೊದಲು ಸರ್ಕಾರಿ ಆಸ್ಪತ್ರೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ನೀಡಲು ಅನುಮತಿ ನೀಡಲಾಗಿದ್ದು, ಆ ಬಳಿಕ ಇದನ್ನು ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಲಾಗಿತ್ತು. 250 ರೂಪಾಯಿ ಪಾವತಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.
ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ
ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದ ಎಲ್ಲಾ ದಿನಗಳು ದಿನದ ಯಾವುದೇ ಸಮಯದಲ್ಲಿ ಲಸಿಕೆ ಪಡೆಯಲು ಅನುಮತಿ ನೀಡಿದೆ.
ಆಸ್ಪತ್ರೆಗಳಲ್ಲಿ ಜನದಟ್ಟಣೆ ತಪ್ಪಿಸಲು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಕೊರೊನಾ ಲಸಿಕೆ 24X7 ಲಭ್ಯವಾಗಲಿದೆ.