ದಾವಣಗೆರೆ: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿ. ಆರೋಪದ ಬೆನ್ನಲ್ಲೇ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ತರಾತುರಿಯಲ್ಲಿ ಅವರ ರಾಜೀನಾಮೆ ಅಂಗೀಕರಿಸಿರುವುದು ಸರಿಯಲ್ಲ ಎಂದರು.
ರಾಸಲೀಲೆ ಪ್ರಕರಣ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲು
ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಚರ್ಚಿಸಿ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಆದರೆ ರಾಜೀನಾಮೆ ಅಂಗೀಕರಿಸಲಾಗಿದೆ. ಹೀಗಾಗಿ ಅವರನ್ನು ತಕ್ಷಣ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.