ಮುಂಬೈ: ನಟಿ ತಾಪ್ಸಿ ಪನ್ನು ಮತ್ತು ನಿರ್ದೇಶಕ ಅನುರಾಗ್ ಕಶ್ಯಪ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆದಾಯ ತೆರಿಗೆ ವಂಚಿಸಿರುವುದು ಪತ್ತೆಯಾಗಿದೆ.
ಮುಂಬೈನಲ್ಲಿರುವ ಮನೆ ಮೇಲೆ ಐಟಿ ನಟಿ ತಾಪ್ಸಿ ಪನ್ನು ಮತ್ತು ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಮನೆಯ ಮೇಲೆ ದಾಳಿ ನಡೆಸಿದಾಗ 300 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಬಗ್ಗೆ ದಾಖಲೆ ಪತ್ತೆಯಾಗಿದೆ. ಷೇರು ವ್ಯವಹಾರ ನಡೆಸಿರುವ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಕೃಷಿ ಕಾಯ್ದೆ ವಿರೋಧಿ ರೈತ ಹೋರಾಟಕ್ಕೆ ಬೆಂಬಲ ಮತ್ತು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಕಾರಣಕ್ಕೆ ಐಟಿ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐಟಿ ಅಧಿಕಾರಿಗಳು ನಿರ್ಮಾಪಕ ಮಧು ವರ್ಮಾ, ತಾಪ್ಸಿ ಪನ್ನು, ಅನುರಾಗ್ ಕಶ್ಯಪ್ ಅವರ ಮುಂಬೈ, ಪುಣೆ ನಿವಾಸಗಳ ಮೇಲೆ ದಾಳಿ ನಡೆಸಿದ್ದರು.