alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಾವು ಬಯಸಿದ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಸರ್ಕಾರಿ ನೌಕರರಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಅನುಕೂಲಕರ. ಆದರೆ ರಾಜ್ಯ ಸರ್ಕಾರ ಈ ಬಾರಿ ಅವಧಿಗೂ ಮುನ್ನ ನಡೆಯುವ ಕೆಲ ವರ್ಗಾವಣೆಯನ್ನು ರದ್ದುಗೊಳಿಸಿದ್ದು, ಇದರಿಂದಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರು ನಿರಾಸೆಗೊಂಡಿದ್ದಾರೆ.

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಈ ಕುರಿತು ಟಿಪ್ಪಣಿ ಹೊರಡಿಸಿದ್ದು, ಅವಶ್ಯವಿರುವ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ವರ್ಗಾವಣೆಗಳನ್ನು ಪರಿಗಣಿಸದಂತೆ ಸೂಚಿಸಿದ್ದಾರೆ. 2021 ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಪ್ರಸಕ್ತ ಸಾಲಿನ ವರ್ಗಾವಣೆ ಆರಂಭವಾಗುವವರೆಗೂ ಈ ನಿಯಮ ಜಾರಿಯಲ್ಲಿರಲಿದೆ ಎನ್ನಲಾಗಿದೆ.

ಒಂದೊಮ್ಮೆ ವರ್ಗಾವಣೆ ಮಾಡುವ ಅನಿವಾರ್ಯತೆ ತಲೆದೋರಿದ ಸಂದರ್ಭದಲ್ಲಿ ಅಂತಹ ವೇಳೆ ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸಿ ಆದೇಶ ಪಡೆದ ಬಳಿಕವೇ ವರ್ಗಾವಣೆ ಪ್ರಕ್ರಿಯೆ ನಡೆಸಬಹುದು ಎಂದು ತಿಳಿಸಲಾಗಿದೆ. ಒಂದೊಮ್ಮೆ ಈ ನಿಯಮ ಉಲ್ಲಂಘಿಸಿ ವರ್ಗಾವಣೆ ನಡೆಸಿದ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...