ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಂಟರ್ನಲ್ ಅಂಕಗಳೂ ಇರಲಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂದಿನಂತೆಯೇ ಪರೀಕ್ಷೆ ನಡೆಸಲಿದೆ. ಆದರೆ, ಈ ಬಾರಿ ಕೊರೋನಾ ಕಾರಣದಿಂದ ತರಗತಿಗಳು ಸರಿಯಾಗಿ ನಡೆಯದ ಕಾರಣ ಪಠ್ಯ ಕಡಿತ ಮಾಡಲಾಗಿದೆ.
ಪರೀಕ್ಷೆ 100 ಅಂಕಗಳಿಗೆ ನಡೆಯಲಿದ್ದು, ಮಾಡೆಲ್ ಪೇಪರ್ ಗಳನ್ನು ಮುಖ್ಯ ಶಿಕ್ಷಕರಿಗೆ ಕಳುಹಿಸಲಾಗಿದೆ. ಪರೀಕ್ಷೆ ಬಗ್ಗೆ ಮಕ್ಕಳಿಗೆ ತಿಳಿಸಲು ಹೇಳಲಾಗಿದ್ದು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 20 ಇಂಟರ್ನಲ್ ಅಂಕಗಳು ಇರುತ್ತವೆ. ಮುಖ್ಯ ಪರೀಕ್ಷೆಗೆ 80 ಅಂಕಳಿದ್ದು, 30 ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಪ್ರತಿಸಲ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 20 ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರುತ್ತಿದ್ದವು ಎಂದು ಶಿಕ್ಷಣ ಇಲಾಖೆ ಆಯುಕ್ತರು ಹೇಳಿದ್ದಾರೆ.