ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಇನ್ನು ಹಲವು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ.
ಮಾನಹಾನಿಕರ ಸುದ್ದಿ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದ 6 ಪ್ರಭಾವಿ ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ‘ಬಾಂಬೆ ಫ್ರೆಂಡ್ಸ್’ ಖ್ಯಾತಿಯ 6 ಸಚಿವರು ಕೋರ್ಟ್ ಮೊರೆ ಹೋಗಿದ್ದು, ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ನಿರ್ಬಂಧಕ್ಕೆ ಮನವಿ ಮಾಡಿದ್ದಾರೆ.
ರಮೇಶ ಜಾರಕಿಹೊಳಿ ಸಿಡಿ ಸ್ಫೋಟದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೆಂಗಳೂರು ಸಿವಿಲ್ ಕೋರ್ಟ್ ಗೆ ಸಚಿವರು ಅರ್ಜಿ ಸಲ್ಲಿಸಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧದ ಸುದ್ದಿಗಳಿಗೆ ತಡೆ ನೀಡುವಂತೆ ಕೋರಿದ್ದಾರೆ. ನ್ಯಾಯಾಲಯಕ್ಕೆ ಈ ಕುರಿತಾಗಿ ಮನವಿ ಮಾಡಿದ್ದಾರೆ.
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ತೋಟಗಾರಿಕೆ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.. ಪಾಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾನಹಾನಿಕರ ಸುದ್ದಿ ಸ್ಫೋಟದ ಬೆನ್ನಲ್ಲೇ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.