ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಚ್ 8 ರಂದು ಬಜೆಟ್ ಮಂಡಿಸಲಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನದಂದೇ ಅವರು ಬಜೆಟ್ ಮಂಡಿಸುತ್ತಿದ್ದಾರೆ.
ಮಹಿಳಾ ಪರ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಸ್ವಾವಲಂಬನೆಗಾಗಿ ಈಗ ಇರುವ ಯೋಜನೆಗಳೊಂದಿಗೆ ವಿಶೇಷ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಕಾರಣದಿಂದ ಆರ್ಥಿಕತೆ ಕುಸಿತವಾಗಿದ್ದರೂ ಬಜೆಟ್ ಗಾತ್ರ ಹೆಚ್ಚಾಗಿರಲಿದೆ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಕೃಷಿ ಕ್ಷೇತ್ರಕ್ಕೆ, ರೈತರಿಗೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.