ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾ ಮಾರ್ಚ್ 11ರಂದು ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗುತ್ತಿದ್ದು ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ‘ರಾಬರ್ಟ್’ ಚಿತ್ರದ ‘ಕಣ್ಣೇ ಅದಿರಿಂದಿ’ ಎಂಬ ತೆಲುಗು ಹಾಡು 4 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.
ತೆಲುಗು ಗಾಯಕಿ ಮಂಗ್ಲಿ ಅವರ ಧ್ವನಿಗೆ ಪ್ರೇಕ್ಷಕರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲರ ಬಾಯಲ್ಲೂ ಈ ಹಾಡು ನಲಿದಾಡುತ್ತಲೇ ಇದೆ. ತೆಲುಗಿನಲ್ಲೇ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ಹೇಳುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಸಖತ್ ಸೌಂಡ್ ಮಾಡುತ್ತಿದೆ.
ಈಗ ಹೇಗಿದ್ದಾರೆ ಗೊತ್ತಾ ʼಕಲ್ ಹೋ ನಾ ಹೋʼ ಖ್ಯಾತಿಯ ಬಾಲನಟಿ…?
ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಶಿವರಾತ್ರಿ ದಿನದಂದು 1800ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.