alex Certify BIG NEWS: ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲು ಸಾಧ್ಯವೇ….? ಕೇಂದ್ರದ ವಿರುದ್ಧ ಹೆಚ್.ಡಿ.ಕೆ. ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲು ಸಾಧ್ಯವೇ….? ಕೇಂದ್ರದ ವಿರುದ್ಧ ಹೆಚ್.ಡಿ.ಕೆ. ಕಿಡಿ

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯದ ಪ್ರಮುಖ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಬೇಕು ಎಂದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ ಎಂದು ಹೇಳಿದ್ದಾರೆ.

ಗೋಕಾಕ್ ವರೆಗೂ ದೀರ್ಘದಂಡ ನಮಸ್ಕಾರ; ತೀವ್ರಗೊಂಡ ರಮೇಶ್ ಬೆಂಬಲಿಗರ ಪ್ರತಿಭಟನೆ

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...